ಕೊಲಂಬೊ: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ 'ಟೆಂಪಲ್ ಟ್ರೀ' ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿದ್ದು, ನಿವಾಸದ ಆವರಣದಲ್ಲಿ ಅಡುಗೆ ಮಾಡಲು ಆರಂಭಿಸಿದ್ದಾರೆ. "ನಾವು ಪ್ರತಿಭಟನಾಕಾರರು ಪ್ರಧಾನಿ ಮನೆಯೊಳಗಿದ್ದೇವೆ. ಅಡುಗೆ ಮಾಡಲು ಪ್ರಾರಂಭಿಸಿದ್ದೇವೆ. ಪಿಎಂ ವಿಕ್ರಮಸಿಂಘೆ ಮತ್ತು ಅಧ್ಯಕ್ಷ ರಾಜಪಕ್ಸ ರಾಜೀನಾಮೆಗಾಗಿ ಹೋರಾಟ ಮಾಡಿದ್ದೇವೆ. ಅವರು ರಾಜೀನಾಮೆ ನೀಡಿದಾಗ ಮಾತ್ರ ನಾವು ಆವರಣವನ್ನು ತೊರೆಯುತ್ತೇವೆ" ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಶ್ರೀಲಂಕಾ ಪ್ರಧಾನಿ ನಿವಾಸದ ಆವರಣದಲ್ಲಿ ಪ್ರತಿಭಟನಾಕಾರರ ಕ್ಯಾಂಪ್; ಭರ್ಜರಿ ಅಡುಗೆ, ಕೇರಂ ಆಟ - ಅಡುಗೆ ಮಾಡುತ್ತಿರುವ ಪ್ರತಿಭಟನಾಕಾರರು
ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ 'ಟೆಂಪಲ್ ಟ್ರೀ' ಆವರಣದೊಳಗೆ ಪ್ರವೇಶಿಸಿರುವ ಪ್ರತಿಭಟನಾಕಾರರು ಅಲ್ಲಿ ಊಟೋಪಾಚಾರದ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಕೇರಂ ಆಡುತ್ತಿರುವ ದೃಶ್ಯಗಳು ದೊರೆತಿವೆ.
ಶ್ರೀಲಂಕಾ ಪ್ರಧಾನಿ ನಿವಾಸದ ಆವರಣದಲ್ಲಿ ಅಡುಗೆ ಮಾಡುತ್ತಿರುವ ಪ್ರತಿಭಟನಾಕಾರರು
ಶ್ರೀಲಂಕಾದಲ್ಲಿ ಏನಾಗುತ್ತಿದೆ?:ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ನುಗ್ಗಿದ್ದು, ಅವರು ಅಜ್ಞಾತ ಸ್ಥಳಕ್ಕೆ ಪಲಾಯನ ಮಾಡಿದ್ದಾರೆ. ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಪ್ರಧಾನಿ ರನಿಲ್ ವಿಕ್ರಮಸಿಂಗ್ ಅವರ ಖಾಸಗಿ ನಿವಾಸಕ್ಕೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.
ಇದನ್ನೂ ಓದಿ:ಶ್ರೀಲಂಕಾಕ್ಕೆ ಭಾರತ ಬೆಂಬಲ: ಆರ್ಥಿಕ ಬಿಕ್ಕಟ್ಟು ನಿವಾರಣೆಗೆ 3.8 ಬಿಲಿಯನ್ ಡಾಲರ್ ನೆರವು
Last Updated : Jul 11, 2022, 8:51 AM IST