ದೋಹಾ:ಗೂಢಚರ್ಯೆ ಆರೋಪದ ಮೇಲೆ ಕತಾರ್‌ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಬಂಧನದಲ್ಲಿರುವ ಎಂಟು ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಅಲ್ಲಿನ ನ್ಯಾಯಾಲಯ ಮರಣದಂಡನೆ ವಿಧಿಸಿರುವುದೆ. ಈ ತೀರ್ಪು ಪ್ರಶ್ನಿಸಿ ಭಾರತ ಸರ್ಕಾರದ ಮೇಲ್ಮನವಿ ಆಲಿಸಲು ಇತ್ತೀಚಿಗೆ ಕತಾರ್ ನ್ಯಾಯಾಲಯ ಸಮ್ಮತಿಸಿದ್ದು, ಶೀಘ್ರದಲ್ಲೇ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಖಾಸಗಿ ಭದ್ರತಾ ಸಂಸ್ಥೆಯಾದ ಅಲ್ ದಹ್ರಾದಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಬೇಹುಗಾರಿಕೆ ಆರೋಪದಡಿ ಗುಪ್ತಚರ ಅಧಿಕಾರಿಗಳು ಬಂಧಿಸಿದ್ದರು. ಅವರು ಇಸ್ರೇಲ್‌ಗಾಗಿ ಬೇಹುಗಾರಿಕೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ ಎಂದು ಸರ್ಕಾರಿ-ಚಾಲಿತ ಪತ್ರಿಕೆ ಅಲ್-ಜಜೀರಾ ವರದಿ ಮಾಡಿದೆ. ಈ ಆದೇಶದಲ್ಲಿ ಅಲ್ಲಿನ ಕೋರ್ಟ್ ಅಕ್ಟೋಬರ್ ಕೊನೆಯ ವಾರದಲ್ಲಿ ಎಂಟು ಭಾರತೀಯರಿಗೆ ಮರಣದಂಡನೆ ವಿಧಿಸಿತ್ತು. ಈ ಕುರಿತು ಆಘಾತ ವ್ಯಕ್ತಪಡಿಸಿರುವ ಭಾರತ ಸರ್ಕಾರ, ಪ್ರಕರಣದ ಕುರಿತು ಕಾನೂನು ಹೋರಾಟ ನಡೆಸುವುದಾಗಿ ಘೋಷಿಸಿತ್ತು. ಅದರ ಭಾಗವಾಗಿ ಕೆಲ ದಿನಗಳ ಹಿಂದೆ ಕತಾರ್ದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಬಿಡುಗಡೆಗೆ ಅಗತ್ಯವಾದ ಕಾನೂನು ಹೋರಾಟದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿತ್ತು.