ಕೊಲಂಬೊ(ಶ್ರೀಲಂಕಾ): ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟಕ್ಕೊಳಗಾಗಿರುವ ಶ್ರೀಲಂಕಾದಲ್ಲಿ ಪ್ರತಿಭಟನಾ ನಿರತರು ದೊಡ್ಡ ಮಟ್ಟದ ಹೋರಾಟ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ಜೊತೆಗೆ ಸಚಿವ ಬಂಡುಲ ಗುಣವರ್ಧನ್ ಕೂಡ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ತಮ್ಮ ರಾಜೀನಾಮೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ವಿಕ್ರಮಸಿಂಘೆ, ಲಂಕಾ ಜನರ ಸುರಕ್ಷತೆ ಮೊದಲ ಆದ್ಯತೆಯಾಗಿದೆ. ಪಕ್ಷದ ನಾಯಕರ ಶಿಫಾರಸು ಸ್ವೀಕರಿಸಿ ಮತ್ತು ಎಲ್ಲ ಪಕ್ಷಗಳು ಸೇರಿ ಸರ್ಕಾರಿ ರಚನೆ ಮಾಡಲು ಅನುವು ಮಾಡಿಕೊಡಲು ನಾನು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಎಲ್ಲ ನಾಗರಿಕರ ಸುರಕ್ಷತೆ ಮತ್ತು ಸರ್ಕಾರದ ಮುಂದುವರಿಯುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಜನರ ರಕ್ಷಣೆ ಮುಖ್ಯ ಕರ್ತವ್ಯವಾಗಿದೆ ಎಂದರು. ರಾಜೀನಾಮೆ ನೀಡುವುದಕ್ಕೂ ಮುಂಚಿತವಾಗಿ ಸಂಸದರೊಂದಿಗೆ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.