ಕರ್ನಾಟಕ

karnataka

ETV Bharat / international

ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ: ವಿದ್ಯಾರ್ಥಿಗಳು ಸೇರಿ 19 ಸಾವು - ಉತ್ತರ ಸಮಂಗನ್ ಪ್ರಾಂತ್ಯದ ರಾಜಧಾನಿ ಐಬಕ್‌

ಅಫ್ಘಾನಿಸ್ತಾನದ ಉತ್ತರ ನಗರ ಐಬಕ್‌ನಲ್ಲಿರುವ ಮದರಸಾದಲ್ಲಿ ಬುಧವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ. ಸುಮಾರು 24 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

students killed in religious school bomb blast  religious school bomb blast at Afghanistan  Afghanistan religious school bomb blast news  ಧಾರ್ಮಿಕ ಶಾಲೆಯಲ್ಲಿ ಬಾಂಬ್ ದಾಳಿ  ವಿದ್ಯಾರ್ಥಿಗಳ ಸಾವು  ಐಬಕ್‌ನಲ್ಲಿರುವ ಮದರಸಾದಲ್ಲಿ ಬುಧವಾರ ನಡೆದ ಸ್ಫೋಟ  ಧಾರ್ಮಿಕ ಶಾಲೆಯೊಂದರಲ್ಲಿ ಬುಧವಾರ ನಡೆದ ಬಾಂಬ್ ಸ್ಫೋಟ  ತಾಲಿಬಾನ್ ಅಧಿಕಾರಿಯೊಬ್ಬರು ಮಾಹಿತಿ  ಉತ್ತರ ಸಮಂಗನ್ ಪ್ರಾಂತ್ಯದ ರಾಜಧಾನಿ ಐಬಕ್‌  ಮಧ್ಯಾಹ್ನದ ಪ್ರಾರ್ಥನೆ ವೇಳೆ ಸ್ಫೋಟ
ಧಾರ್ಮಿಕ ಶಾಲೆಯಲ್ಲಿ ಬಾಂಬ್ ದಾಳಿ

By

Published : Dec 1, 2022, 8:31 AM IST

ಕಾಬೂಲ್: ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬುಧವಾರ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 19 ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಉತ್ತರ ಸಮಂಗನ್ ಪ್ರಾಂತ್ಯದ ರಾಜಧಾನಿ ಐಬಕ್‌ನಲ್ಲಿ ಮಧ್ಯಾಹ್ನದ ಪ್ರಾರ್ಥನೆಯ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಹೇಳಿದರು. ದಾಳಿಯ ಹೊಣೆಯನ್ನು ಇಲ್ಲಿಯವರೆಗೆ ಯಾರೂ ಹೊತ್ತುಕೊಂಡಿಲ್ಲ.

ಆಗಸ್ಟ್ 2021 ರಲ್ಲಿ ತಾಲಿಬಾನ್ ಉಗ್ರರು ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ ಹಿಂಸಾಚಾರಕ್ಕೆ ಇಸ್ಲಾಮಿಕ್ ಸ್ಟೇಟ್ (ಐಎಸ್) ಕಾರಣ ಎಂದು ಹೇಳಲಾಗುತ್ತದೆ. ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಶಿಯಾ ಜನಸಂಖ್ಯೆಯನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ರಷ್ಯಾ ಸೈನಿಕರ ಪತ್ನಿಯರಿಂದ ಅತ್ಯಾಚಾರಕ್ಕೆ ಕುಮ್ಮಕ್ಕು: ಉಕ್ರೇನ್ ಪ್ರಥಮ ಮಹಿಳೆ ಗಂಭೀರ ಆರೋಪ

ABOUT THE AUTHOR

...view details