ನಾಮ್ ಪೆನ್ (ಕಾಂಬೋಡಿಯಾ): ಥಾಯ್ಲೆಂಡ್ ದೇಶದ ಗಡಿಯಲ್ಲಿರುವ ಕಾಂಬೋಡಿಯಾದ ಹೋಟೆಲ್ ಕ್ಯಾಸಿನೊದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ. ಪೊಯಿಪೆಟ್‌ನಲ್ಲಿರುವ ಗ್ರ್ಯಾಂಡ್ ಡೈಮಂಡ್ ಸಿಟಿ ಹೋಟೆಲ್-ಕ್ಯಾಸಿನೊದಲ್ಲಿ ಬುಧವಾರ ಸ್ಥಳೀಯ ಕಾಲಮಾನ ರಾತ್ರಿ 11:30ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು.
ಈ ಅವಘಡದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 30 ಮಂದಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಸುಮಾರು 400 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಬೋಡಿಯನ್ ಪೊಲೀಸರ ಅಂತಿಮ ವರದಿ ತಿಳಿಸಿದೆ.
ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ವಿಡಿಯೋ ತುಣುಕಲ್ಲಿ ಬೆಂಕಿ ಹೊಟೇಲ್ ಕಾಂಪೌಂಡ್ ಆವರಿಸಿರುವುದನ್ನು ನೋಡಬಹುದು. ಕೆಲವು ಕ್ಲಿಪ್‌ಗಳು, ಹೊತ್ತಿ ಉರಿಯುತ್ತಿರುವ ಕಟ್ಟಡದಿಂದ ಜನರು ಜಿಗಿಯುವುದನ್ನು ತೋರಿಸುತ್ತಿವೆ. ಬೆಂಕಿ ಆವರಿಸಿದ ಸಂದರ್ಭದಲ್ಲಿ ಕ್ಯಾಸಿನೊದಲ್ಲಿ ವಿದೇಶಿ ಪ್ರಜೆಗಳಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ:ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಮೂರನೇ ಮಹಡಿಯಿಂದ ಜಿಗಿದು ಎಂಜಿನಿಯರ್ ಸಾವು