ಕರ್ನಾಟಕ

karnataka

By

Published : Apr 12, 2022, 5:29 PM IST

ETV Bharat / international

ಮೋದಿಗೆ ಧನ್ಯವಾದ ತಿಳಿಸಿ ಮತ್ತೆ ಕಾಶ್ಮೀರ ತಗಾದೆ ತೆಗೆದ ಪಾಕ್‌ನ ನೂತನ ಪ್ರಧಾನಿ

ನೆರೆ ರಾಷ್ಟ್ರ ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಿ ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದು, ಅವರಿಗೆ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದರು.

Shehbaz Sharif thanks PM Modi
Shehbaz Sharif thanks PM Modi

ಇಸ್ಲಾಮಾಬಾದ್​(ಪಾಕಿಸ್ತಾನ):ರಾಜಕೀಯ ಮೇಲಾಟದ ಮಧ್ಯೆ ಪಾಕಿಸ್ತಾನದಲ್ಲಿ ನೂತನ ಪ್ರಧಾನಿಯಾಗಿ ಶೆಹಬಾಜ್​ ಪರೀಫ್​ ಆಯ್ಕೆಯಾಗಿದ್ದು, ನಿನ್ನೆ ರಾತ್ರಿ ಪ್ರಮಾಣವಚನ ಸ್ವೀಕರಿಸಿದರು. ನೂತನ ಪ್ರಧಾನಿಗೆ, ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದರು. 'ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು. ಭಾರತವು ಭಯೋತ್ಪಾದನೆ ಮುಕ್ತ, ಶಾಂತಿ ಮತ್ತು ಸ್ಥಿರತೆಯ ವಾತಾವರಣವನ್ನು ಬಯಸುತ್ತದೆ. ಈ ಮೂಲಕ ಅಭಿವೃದ್ಧಿ ವಿಚಾರಗಳಲ್ಲಿ ಬರುವ ಸವಾಲುಗಳಿಗೆ ನಮ್ಮ ಗಮನ ಕೇಂದ್ರೀಕರಿಸಿ, ಜನರ ಒಳಿತನ್ನು ಖಾತ್ರಿಪಡಿಸಬಹುದು' ಎಂಬ ಆಶಾವಾದವನ್ನು ಟ್ವೀಟ್‌ನಲ್ಲಿ ವ್ಯಕ್ತಪಡಿಸಿದ್ದರು.

ಪ್ರಧಾನಿ ಮೋದಿ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಶೆಹಬಾಜ್ ಷರೀಫ್​, ಅಭಿನಂದನೆ ಸಲ್ಲಿಸಿದ್ದಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದಗಳು. ಭಾರತದೊಂದಿಗೆ ಶಾಂತಿಯುತ, ಸಹಕಾರಿ ಬಾಂಧವ್ಯವನ್ನು ಪಾಕ್ ಬಯಸುತ್ತದೆ. ಜಮ್ಮು-ಕಾಶ್ಮೀರ ಸೇರಿದಂತೆ ಭಾರತ-ಪಾಕಿಸ್ತಾನ ಮಧ್ಯೆ ಉಳಿದುಕೊಂಡಿರುವ ಎಲ್ಲ ವಿವಾದಗಳ ಶಾಂತಿಯುತ ಇತ್ಯರ್ಥ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ತ್ಯಾಗದ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:'ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಲು ಕಾಶ್ಮೀರ ವಿವಾದ ಇತ್ಯರ್ಥವಾಗ್ಬೇಕು': ಪಾಕ್​ ನಿಯೋಜಿತ ಪ್ರಧಾನಿ

ABOUT THE AUTHOR

...view details