ವರ್ಜೀನಿಯಾ: ಅಮೆರಿಕದ ವರ್ಜೀನಿಯಾ ರಾಜ್ಯದ ಚೆಸಾಪೀಕ್ನಲ್ಲಿರುವ ವಾಲ್ಮಾರ್ಟ್ ಕಂಪನಿಯ ಮಳಿಗೆಯಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವರು ಮೃತಪಟ್ಟಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೂಟರ್ ಕೂಡ ಸಾವಿಗೀಡಾಗಿದ್ದಾನೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಮೆರಿಕನ್ ಮಾಧ್ಯಮಗಳ ಪ್ರಕಾರ, ದಾಳಿಯಲ್ಲಿ ಎಷ್ಟು ಜನ ಸಾವಿಗೀಡಾಗಿದ್ದಾರೆ ಎಂಬುದನ್ನು ಪೊಲೀಸರು ಖಚಿತಪಡಿಸಿಲ್ಲ. ಆದರೆ ಸಾವಿನ ಸಂಖ್ಯೆ 10 ಕ್ಕಿಂತ ಕಡಿಮೆ ಇರಬಹುದು ಎಂದು ಸಾರ್ವಜನಿಕ ಮಾಹಿತಿ ಅಧಿಕಾರಿ ಲಿಯೊ ಕೊಸಿನ್ಸ್ಕಿ ಹೇಳಿಕೆ ನೀಡಿದ್ದಾರೆ.