ಲಹೋರ್(ಪಾಕಿಸ್ತಾನ) :ಪಾಕಿಸ್ತಾನದ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಭಜ್ವಾ ವಿರುದ್ಧ ನಿಂದನಾತ್ಮಕ ಅಭಿಯಾನ ನಡೆಸುತ್ತಿದ್ದ ಆರೋಪದಡಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಪಕ್ಷದ ಸಾಮಾಜಿಕ ಜಾಲತಾಣ ತಂಡದ ಎಂಟು ಜನರನ್ನು ಫೆಡೆರಲ್ ತನಿಖಾ ಸಂಸ್ಥೆ (ಎಫ್ಐಎ) ಬಂಧಿಸಲಾಗಿದೆ. ಅಲ್ಲದೇ, ಬಂಧಿತ ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನೂ ಗುರಿಯಾಗಿಕೊಂಡು ಅಪಪ್ರಚಾರ ಮಾಡುತ್ತಿದ್ದರು ಎನ್ನಲಾಗಿದೆ.
ಇಮ್ರಾನ್ ಖಾನ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ಮತದ ನಿಲುವಳಿಯನ್ನು ಮಂಡಿಸಿದ್ದರು. ಇದರಲ್ಲಿ ಇಮ್ರಾನ್ ಸೋತು ಪ್ರಧಾನಿ ಹುದ್ದೆಯಿಂದ ಪದಚ್ಯುತಿಗೊಂಡಿದ್ದಾರೆ. ಇದರ ಭಾಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದಿಂದ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಭಜ್ವಾ ಹಾಗೂ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಅಪಪ್ರಚಾರ ಆರಂಭಿಸಲಾಗಿತ್ತು.