ಕೊಲಂಬೊ(ಶ್ರೀಲಂಕಾ):ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿರುವ ಕಾರಣ ಆಹಾರ, ಇಂಧನ ಮತ್ತು ಅಗತ್ಯವಸ್ತುಗಳ ಕೊರತೆ ತೀವ್ರವಾಗಿದೆ. ಇದೇ ವಿಚಾರವಾಗಿ ಸರ್ಕಾರದ ವಿರುದ್ಧ ತೀವ್ರವಾದ ಪ್ರತಿಭಟನೆ ನಡೆಯುತ್ತಿದೆ. ಈ ವೇಳೆ ಪೊಲೀಸರು ನಡೆಸಿರುವ ಫೈರಿಂಗ್ನಲ್ಲಿ ಓರ್ವ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಅರ್ಥಶಾಸ್ತ್ರದಲ್ಲಿ ಪದವಿ ಪಡೆದ್ರೂ ಸಿಗದ ಕೆಲಸ, ಚಹಾ ಅಂಗಡಿಯಲ್ಲಿ ಬದುಕು ಕಟ್ಟಿಕೊಂಡ ಪದವೀಧರೆ!
ಆರ್ಥಿಕ ಬಿಕ್ಕಟ್ಟಿನಿಂದಾಗಿ ಸಮಸ್ಯೆಗೊಳಗಾಗಿರುವ ಜನರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಕಲ್ಲು ತೂರಾಟ ನಡೆದಿರುವ ಕಾರಣ ಹಿಂಸಾಚಾರ ಉಂಟಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ. ರಾಜಧಾನಿ ಕೊಲಂಬೊದಿಂದ 95 ಕಿಲೋ ಮೀಟರ್ ದೂರದಲ್ಲಿರುವ ಮಧ್ಯ ಶ್ರೀಲಂಕಾದ ರಂಬುಕ್ಕನಾದಲ್ಲಿ ತೀವ್ರ ತೈಲ ಕೊರತೆ ಉಂಟಾಗಿದ್ದು, ಪ್ರತಿ ಲೀಟರ್ಗೆ 300ರೂಪಾಯಿಗೂ ಅಧಿಕ ಬೆಲೆಗೆ ಮಾರಾಟವಾಗ್ತಿದೆ. ಹೀಗಾಗಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆಗೆ ಪ್ರತಿಭಟನಾಕಾರರು ಆಗ್ರಹಿಸಿದ್ದು, ಇದಕ್ಕೆ ಮಾಜಿ ಕ್ರಿಕೆಟಿಗರಾದ ಅರ್ಜುನ್ ರಣತುಂಗ, ಸನತ್ ಜಯಸೂರ್ಯ ಸೇರಿದಂತೆ ಅನೇಕರು ಸಾಥ್ ನೀಡಿದ್ದಾರೆ.