ಉತ್ತರ ಪ್ರದೇಶ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಆಕೆಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಅತ್ಯಾಚಾರವೆಸಗಿ 12 ವರ್ಷದ ಬಾಲಕಿಯ ಕೊಲೆ - ಮಹಾರಾಜ್‌ಗಂಜ್
ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿರುವ ಮಹಾರಾಜ್‌ಗಂಜ್ ಪೊಲೀಸರು, ಆತನ ವಿರುದ್ಧ ಐಪಿಸಿ ಸೆಕ್ಷನ್ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ
ಶುಕ್ರವಾರ ಸಂಜೆಯಿಂದ ನಾಪತ್ತೆಯಾಗಿದ್ದ ಬಾಲಕಿ ಶನಿವಾರ ಸಂಜೆ ಸೋಹಗಿ ಬಾರ್ವಾ ವನ್ಯಜೀವಿ ಅಭಯಾರಣ್ಯದ ಪ್ರದೇಶದಲ್ಲಿ ಶವವಾಗಿ ಸಿಕ್ಕಿದ್ದಾಳೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ತಿಳಿಸಿದ್ದಾರೆ.
ಈ ಸಂಬಂಧ ಆರೋಪಿ ಮನೋಜ್ ಪಾಸ್ವಾನ್ನನ್ನು ಬಂಧಿಸಿ, ಐಪಿಸಿ ಸೆಕ್ಷನ್ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ರೋಹಿತ್ ಸಿಂಗ್ ಹೇಳಿದ್ದಾರೆ.