ಬರ್ಮರ್(ರಾಜಸ್ಥಾನ):ರಾಮಕಥೆ ನಡೆಯುತ್ತಿದ್ದ ವೇಳೆ ದಿಢೀರನೆ ಮಳೆ ಸುರಿದ ಪರಿಣಾಮ ಟೆಂಟ್ ಕುಸಿದು ಬಿದ್ದು ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಮಕಥೆ ನಡೆಯುತ್ತಿದ್ದ ವೇಳೆ ಏಕಾಏಕಿ ಮಳೆ ಸುರಿದ ಪರಿಣಾಮ ಟೆಂಟ್ ಕುಸಿದು ಬಿದ್ದಿದೆ. ಟೆಂಟ್ ಬಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ದುರಂತ ಸಂಬಂಧ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಸಾವನ್ನಪ್ಪಿರುವವರ ಕುಟುಂಬದ ಜೊತೆಗೆ ನಾನಿದ್ದೇನೆ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.