ನವದೆಹಲಿ:16 ವರ್ಷದ ಬಾಲಕಿ ಆಕೆಯ ನೆರೆಮನೆಯ ವ್ಯಕ್ತಿಯಿಂದಲೇ ಅತ್ಯಾಚಾರಕ್ಕೆ ಒಳಗಾದ ಘಟನೆ ಆಗ್ನೇಯ ದೆಹಲಿಯ ಸರೈ ಕಲೆ ಖಾನ್ ಪ್ರದೇಶದಲ್ಲಿ ಗುರುವಾರ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಪ್ರಾಪ್ತನೋ, ವಯಸ್ಕನೋ ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಅಕ್ಕಪಕ್ಕದ ಮನೆಯವರಾಗಿದ್ದು, ಸುಮಾರು ಮೂರು ವರ್ಷದಿಂದ ಪರಿಚಯ ಇದ್ದರೆಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಸಂತ್ರಸ್ತ ಬಾಲಕಿಗೆ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಆರೋಗ್ಯ ಸ್ಥಿತಿ ಚೇತರಿಕೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.