ರಾಯಗಡ್: ಕಂದಾಯ ಗುಪ್ತಚರ ನಿರ್ದೇಶನಾಲಯ ಹಾಗೂ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 1000 ಕೋಟಿ ರೂ. ಮೌಲ್ಯದ ಬರೋಬ್ಬರಿ 191 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
1000 ಕೋಟಿ ರೂ. ಮೌಲ್ಯದ 191 ಕೆಜಿ ಡ್ರಗ್ ವಶಕ್ಕೆ..! - Directorate of Revenue Intelligence
ಮಹಾರಾಷ್ಟ್ರದಿಂದ ಅಫ್ಘಾನಿಸ್ತಾನಕ್ಕೆ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
![1000 ಕೋಟಿ ರೂ. ಮೌಲ್ಯದ 191 ಕೆಜಿ ಡ್ರಗ್ ವಶಕ್ಕೆ..! drugs seized](https://etvbharatimages.akamaized.net/etvbharat/prod-images/768-512-8363868-thumbnail-3x2-megha.jpg)
ಡ್ರಗ್ ವಶಕ್ಕೆ
ನವಿ ಮುಂಬೈನ ನ್ಹಾ ಶೆವಾ ಬಂದರಿನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಪ್ಲಾಸ್ಟಿಕ್ ಪೈಪ್ಗಳ ಒಳಗಡೆ ಮಾದಕ ವಸ್ತುಗಳನ್ನು ಅಡಗಿಸಿಟ್ಟುಕೊಂಡು ಮಹಾರಾಷ್ಟ್ರದಿಂದ ಅಫ್ಘಾನಿಸ್ತಾನಕ್ಕೆ ಸಾಗಿಸುತ್ತಿದ್ದರು.
ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ಪೊಲೀಸ್ ಕಸ್ಟಡಿಗೆ ಆದೇಶಿಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ ತಿಳಿಸಿದೆ. ಕಸ್ಟಮ್ಸ್ ಅಧಿಕಾರಿಗಳು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.