ಕಲಬುರಗಿ: ನಡು ರಸ್ತೆಯಲ್ಲಿ ವಿದ್ಯಾರ್ಥಿಯನ್ನು ಕೊಚ್ಚಿ ಕೊಲೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸ್ಟೇಷನ್ ಬಜಾರ್ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯಲ್ಲಿ ವಿದ್ಯಾರ್ಥಿ ಹತ್ಯೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳ ಬಂಧನ - ಕಲಬುರಗಿ ಇತ್ತೀಚಿನ ಸುದ್ದಿ
ಮಂಗಳವಾರ ರಾತ್ರಿ ಹಳೆ ಜೇವರ್ಗಿ ರಸ್ತೆಯ ರೈಲ್ವೆ ಕೆಳ ಸೇತುವೆ ಬಳಿ ಡಿಪ್ಲೊಮಾ ವಿದ್ಯಾರ್ಥಿ ಸಾಗರ (20) ಎಂಬಾತನ ಮೇಲೆ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆ ಯತ್ನ
ಶಿವಕುಮಾರ ಅಲಿಯಾಸ್ ಡೂಗ ಶಿವ್ಯಾ ಹಾಗೂ ಮಹ್ಮದ್ ಶಾಹಿದ್ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತೆಲೆ ಮರೆಸಿಕೊಂಡ ಆರೋಪಿಗಳ ಬಂಧನಕ್ಕೆ ಜಾಲ ಬಿಸಲಾಗಿದೆ.
ಮಂಗಳವಾರ ರಾತ್ರಿ ಹಳೆ ಜೇವರ್ಗಿ ರಸ್ತೆಯ ರೈಲ್ವೆ ಕೆಳ ಸೇತುವೆ ಬಳಿ ಡಿಪ್ಲೊಮಾ ವಿದ್ಯಾರ್ಥಿ ಸಾಗರ (20) ಎಂಬಾತನ ಮೇಲೆ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿ ಪರಾರಿ ಆಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಸದ್ಯ ಇಬ್ಬರನ್ನು ಬಂಧಿಸಿದ್ದಾರೆ.