ಮೊಹಾಲಿ (ಪಂಜಾಬ್): ಬರೋಬ್ಬರಿ 41 ಜನರನ್ನು ಬಲಿ ಪಡೆದ ಮಹಾರಾಷ್ಟ್ರದ ಭಿವಂಡಿಯಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದ ನೆನಪು ಮಾಸುವ ಮುನ್ನವೇ ಪಂಜಾಬ್ನಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ.
ಪಂಜಾಬ್ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರ ದುರ್ಮರಣ
ಪಂಜಾಬ್ನ ಮೊಹಾಲಿ ಜಿಲ್ಲೆಯ ಡೇರಾ ಬಾಸ್ಸಿ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಪಂಜಾಬ್ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ
ಇದೀಗ ಪಂಜಾಬ್ನ ಮೊಹಾಲಿ ಜಿಲ್ಲೆಯ ಡೇರಾ ಬಾಸ್ಸಿ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಡೇರಾ ಬಾಸ್ಸಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಕುಲದೀಪ್ ಬಾವಾ ತಿಳಿಸಿದ್ದಾರೆ.
ಕಟ್ಟಡದ ಅವಶೇಷಗಳಡಿ ಇನ್ನೂ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.