ಬಾರ್ಮರ್ (ರಾಜಸ್ಥಾನ): ಬಾವಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ನಾಲ್ವರು ಕಾರ್ಮಿಕರು ಬಾರ್ಮರ್ ಜಿಲ್ಲೆಯ ರೋಹಿಲಾಡಾ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಕಾಮಗಾರಿಯಲ್ಲಿ ತೊಡಗಿದ್ದರು. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಜಿಲ್ಲಾಡಳಿತ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ ಇಬ್ಬರನ್ನು ಮಾತ್ರ ರಕ್ಷಿಸಲಾಗಿದ್ದು, ಇನ್ನಿಬ್ಬರು ಬಾವಿಯೊಳಗೆ ಸಾವನ್ನಪ್ಪಿದ್ದಾರೆ.