ಉತ್ತರ ಪ್ರದೇಶ: ಇಂದು ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ 32 ಮಂದಿ ವಲಸೆ ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 32 ವಲಸೆ ಕಾರ್ಮಿಕರಿಗೆ ಗಾಯ - ಅಯೋಧ್ಯೆಯಲ್ಲಿ ರಸ್ತೆ ಅಪಘಾತ
09:13 May 18
ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 32 ವಲಸೆ ಕಾರ್ಮಿಕರಿಗೆ ಗಾಯ
ಅಯೋಧ್ಯೆಯಲ್ಲಿ ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 20 ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. ಇವರೆಲ್ಲರೂ ಮುಂಬೈನಿಂದ ಉತ್ತರ ಪ್ರದೇಶದ ಸಿದ್ದಾರ್ಥ ನಗರಕ್ಕೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಉತ್ತರ ಪ್ರದೇಶದಿಂದ ಬಿಹಾರಕ್ಕೆ ವಲಸೆ ಕಾರ್ಮಿಕರು ತೆರಳುತ್ತಿದ್ದ ಬಸ್ಗೆ ಖುಷಿನಗರ್ನಲ್ಲಿ ಟ್ರಕ್ವೊಂದು ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿದ್ದು, 8 ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಎರಡು ದಿನಗಳಿಂದ ಹಿಂದೆ ಔರಾಯ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟ ಬಳಿಕ ಸಿಎಂ ಯೋಗಿ ಆದಿತ್ಯನಾಥ್, ಜಿಲ್ಲಾಡಳಿತಗಳಿಗೆ ಅಸುರಕ್ಷಿತವಾಗಿ ವಾಹನಗಳಲ್ಲಿ ಬರುವ ಕಾರ್ಮಿಕರಿಗೆ ಅವಕಾಶ ನೀಡಬೇಡಿ ಎಂದು ಸೂಚನೆ ನೀಡಿದ್ದರು.