ಹೈದರಾಬಾದ್ (ತೆಲಂಗಾಣ):ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಎಸಗಿದ ಎರಡು ವಿವಿಧ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳಿಗೆ 20 ವರ್ಷಗಳ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
2017ರಲ್ಲಿ ತೆಲಂಗಾಣದ ಲಾಲಗೂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟ್ಯೂಷನ್ಗೆ ತೆರಳುತ್ತಿದ್ದ 5 ವರ್ಷದ ಬಾಲಕಿ ಮೇಲೆ ಪ್ರಭಾಕರ್ ಎಂಬಾತ ಅತ್ಯಾಚಾರ ನಡೆಸಿದ್ದನು. 2018ರಲ್ಲಿ ಯೂಸೂಫ್ಗೂಡದ ಜ್ಯುಬಿಲಿ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದ್ದನು. ಆರೋಪಿಗಳ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು.