ಕೃಷ್ಣಗಿರಿ (ತಮಿಳುನಾಡು):ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು 40 ವರ್ಷದ ಗಂಡು ಆನೆ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಅಪಘಾತ ಸಂಭವಿಸಿದೆ. ಲಾರಿ ಗುದ್ದಿದ ರಭಸಕ್ಕೆ ಗಜರಾಜನ ಕಾಲುಗಳು ಮುರಿದಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದೆ. ಸ್ಥಳಕ್ಕೆ ಬಂದ ಹೊಸೂರು ಅರಣ್ಯ ಇಲಾಖೆ ಸಿಬ್ಬಂದಿ ವೈದ್ಯರನ್ನು ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಗಂಭೀರವಾದ ಗಾಯಗಳಿಂದ ಬಳಲುತ್ತಿದ್ದ ಆನೆ ಇಂದು ಬೆಳಗ್ಗೆ ಪ್ರಾಣಬಿಟ್ಟಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ- 1972 ಅಡಿಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.