ಕರ್ನಾಟಕ

karnataka

ETV Bharat / jagte-raho

60 ವರ್ಷದ ಕಾಮುಕನಿಂದ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ - ಅತ್ಯಾಚಾರ

ಚಾಕೋಲೆಟ್​ ನೀಡುವ ನೆಪದಲ್ಲಿ ಇಬ್ಬರು ಬಾಲಕಿಯರ ಮೇಲೆ 60 ವರ್ಷದ ಕಾಮುಕನೋರ್ವ ಅತ್ಯಾಚಾರಗೈದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

By

Published : Mar 21, 2019, 7:01 PM IST

ಪುಣೆ: 60 ವರ್ಷದ ಕಾಮುಕನೋರ್ವ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪೊಲೀಸ್​ ವರಿಷ್ಠಾಧಿಕಾರಿ ಹೇಳಿಕೆ

ಅತ್ಯಾಚಾರವೆಸಗಿರುವ ಆರೋಪದ ಮೇಲೆ ಈಗಾಗಲೇ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಪುಣೆ ನಗರದ ಕೋಥ್ರೂದ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮುಕ ವ್ಯಕ್ತಿ ಚಾಕೋಲೆಟ್​ ನೀಡುವ ಆಮಿಷವೊಡ್ಡಿ ಈ ದುಷ್ಕೃತ್ಯವೆಸಗಿದ್ದಾನೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಇತ್ತ ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯರನ್ನ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ABOUT THE AUTHOR

...view details