ಮಹಾರಾಷ್ಟ್ರ: ಪುಣೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿರುವ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 8 ಜನರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುಣೆ-ಸೋಲಾಪುರ ಹೆದ್ದಾರಿಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 8 ಮಂದಿ ಬಲಿ - Pune Rural police
ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 8 ಜನರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೊದಲ ಅಪಘಾತದಲ್ಲಿ ಪಾದಾಚಾರಿಗೆ ಅಪರಿಚಿತ ವಾಹವೊಂದು ಗುದ್ದಿ ಹೋಗಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಎರಡನೇ ಪ್ರಕರಣದಲ್ಲಿ ನಿಂತಿದ್ದ ಕಂಟೈನರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪುಣೆ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮೂರನೇಯ ಅಪಘಾತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ರಕ್ನ ಚಕ್ರವು ಚರಂಡಿಯಲ್ಲಿ ಸಿಲುಕಿ ಹಾಕಿಕೊಂಡಿತ್ತು. ಈ ವೇಳೆ ಬಂದ ಎರಡು ಕಾರುಗಳು ಟ್ರಕ್ಗೆ ಗುದ್ದಿವೆ. ಘಟನೆಯಲ್ಲಿ ಕಾರು ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.