ಕರ್ನಾಟಕ

karnataka

ETV Bharat / jagte-raho

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ​, ಚಿಕಿತ್ಸೆ ವೇಳೆ ಸಾವು: ಕಾಮುಕನ ಬಂಧನ - ಕಾಮುಕನ ಬಂಧಿಸಿದ ಪೊಲೀಸ್​

ಉತ್ತರಪ್ರದೇಶದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದ್ದು, 8 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಪರಿಣಾಮ ಆಕೆ ಸಾವಿಗೀಡಾಗಿದ್ದಾಳೆ.

A 19-year-old man arrested on charges of rape
A 19-year-old man arrested on charges of rape

By

Published : Apr 5, 2020, 10:13 AM IST

ಸಲಾರ್ಪುರ್​​(ಯುಪಿ): 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನೊಬ್ಬನನ್ನು ಬಂಧಿಸುವಲ್ಲಿ ಉತ್ತರಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ತಲೆಮರೆಸಿಕೊಂಡಿದ್ದ. ಕೃತ್ಯದಿಂದ ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಬಾಲಕಿ ಚಿಕಿತ್ಸೆ ವೇಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತನ ವಿರುದ್ಧ ಅತ್ಯಾಚಾರ, ಕೊಲೆ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಬಾಲಕಿಗೆ ಇಲ್ಲಿನ ಪಿಜೆಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಹೆಚ್ಚು ರಕ್ತಸ್ರಾವವಾಗಿದ್ದ ಕಾರಣ ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ.

ABOUT THE AUTHOR

...view details