ಪೂರ್ವ ಗೋದಾವರಿ: 50 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಬಳಿಕ ಆಕೆಯನ್ನ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಇವಾಲವರಂ ಮಂಡಲ್ನ ಜಿ ವೆಮವರಂನಲ್ಲಿ ನಡೆದಿದೆ.
50 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್ & ಮರ್ಡರ್! - gang rape and murder latest news
ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಮಾಡಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ.
ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳನ್ನು ಹುಡುಕುತ್ತಿರುವುದಾಗಿ ಹಾಗೂ ಸಂಜೆಯ ವೇಳೆಗೆ ಪ್ರಕರಣ ಬಗೆಹರಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಮೃತ ಮಹಿಳೆಯ ಪತಿ ಹಾಗೂ ಮಗ ತೀರಿಕೊಂಡು ಕೆಲ ವರುಷಗಳಾಗಿದ್ದು, ಮಗಳು ಹೈದರಾಬಾದ್ನಲ್ಲಿ ವಾಸವಿದ್ದಾರೆ. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದ ವೇಳೆ ಘಟನೆ ನಡೆದಿದೆ.ಹೈದರಾಬಾದ್ನ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿರುದ್ಧ ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿರುವಾಗಲೇ, ಈ ರೀತಿ ಅನೇಕ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಮಾನವ ಕುಲವನ್ನೇ ಪ್ರಶ್ನಿಸುವಂತಿದೆ.