ಆಗ್ರಾ:ಎರಡು ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಆಗ್ರಾದಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 6ಕ್ಕೂ ಹೆಚ್ಚು ಜನರಿಗೆ ಗಾಯ - ಆಗ್ರಾದಲ್ಲಿ ಅಗ್ನಿ ಅವಘಡ
ಆಗ್ರಾದ ಶಹಾಗಂಜ್ ಪ್ರದೇಶದಲ್ಲಿನ ಎರಡು ಮನೆಗಳಿಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ.
ಆಗ್ರಾದಲ್ಲಿ ಅಗ್ನಿ ಅವಘಡ
ಆಗ್ರಾದ ಶಹಾಗಂಜ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.