ಮಂಗಳೂರು: ಆ್ಯಂಬುಲೆನ್ಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ದ.ಕ.ಜಿಲ್ಲೆಯ ವಿಟ್ಲ ಸಮೀಪದ ನೇರಳಕಟ್ಟೆ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ.
ಆ್ಯಂಬುಲೆನ್ಸ್-ಟಿಪ್ಪರ್ ನಡುವೆ ಭೀಕರ ಅಪಘಾತ: ಮಹಿಳೆ ಸಾವು, ನಾಲ್ವರಿಗೆ ಗಂಭೀರ ಗಾಯ - etv bharat
ಆ್ಯಂಬುಲೆನ್ಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ದ.ಕ.ಜಿಲ್ಲೆಯ ವಿಟ್ಲ ಸಮೀಪದ ನೇರಳಕಟ್ಟೆ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ.
ಭೀಕರ ಅಪಘಾತ
ರೋಗಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿಗೆ ಆಸ್ಪತ್ರೆಗೆ ದಾಖಲಿಸಲು ಕರೆತರುವ ಸಂದರ್ಭ ಈ ದುರಂತ ಸಂಭವಿಸಿದೆ.
ಟಿಪ್ಪರ್ ಪುತ್ತೂರಿನಿಂದ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸಂಚರಿಸುವಾಗ ಈ ಅಪಘಾತ ನಡೆದಿದೆ. ಆ್ಯಂಬುಲೆನ್ಸ್ನಲ್ಲಿದ್ದವರು ಇಡ್ಕಿದು ಗ್ರಾಮದ ಸುರ್ಯ ನಿವಾಸಿಯೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.