ಕರ್ನಾಟಕ

karnataka

ETV Bharat / jagte-raho

ಕೊರೊನಾ ಎಫೆಕ್ಟ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನೇಣಿಗೆ ಶರಣಾದ ಯುವಕ - ಜೆರಾಕ್ಸ್ ಅಂಗಡಿ ಯುವಕ ಸಾವು

ಲಾಕ್​​​ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಒಂಟಿಕೊಪ್ಪಲಿನಲ್ಲಿ ನಡೆದಿದೆ.

Police station
Police station

By

Published : Aug 24, 2020, 12:04 PM IST

ಮೈಸೂರು: ಕೋವಿಡ್​​​​ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕನೊಬ್ಬ ವ್ಯಾಪಾರದಲ್ಲಿ ನಷ್ಟ ಉಂಟಾಗಿ ನೇಣಿಗೆ ಶರಣಾಗಿರುವ ಘಟನೆ ನಗರದ ಒಂಟಿಕೊಪ್ಪಲಿನಲ್ಲಿ ನಡೆದಿದೆ.

ದಿನೇಶ್ (26) ನೇಣಿಗೆ ಶರಣಾದ ಯುವಕ. ಇವನು ಒಂಟಿಕೊಪ್ಪಲ ನಿವಾಸಿಯಾಗಿದ್ದು, ಜೆರಾಕ್ಸ್ ಅಂಗಡಿ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದನು. ಜೊತೆಗೆ ಹಲವು ಕಡೆ ಸಾಲ ಮಾಡಿಕೊಂಡಿದ್ದನು. ಆದರೆ, ಕೊರೊನಾ ಲಾಕ್​​​ಡೌನ್ ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಎನ್ನಲಾಗಿದ್ದು, ಸಾಲ ತೀರಿಸಲಾಗದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.

ಸ್ಥಳಕ್ಕೆ ವಿವಿ ಪುರಂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details