ಕಾರವಾರ: ಟೆಂಪೋಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 10ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಸಾಗರ ರಸ್ತೆಯ ಸಬ್ಬತ್ತೆ ಕ್ರಾಸ್ ಬಳಿ ನಡೆದಿದೆ.
ಟೆಂಪೋಗಳ ನಡುವೆ ಮುಖಾಮುಖಿ : 10ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಎರಡು ಟೆಂಪೋಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನದಲ್ಲಿದ್ದ 10ಕ್ಕೂ ಹೆಚ್ಚು ಪ್ರವಾಸಿಗರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಮುಖಾಮುಖಿ ಡಿಕ್ಕಿಯಾದ ಪ್ರವಾಸಿಗರ ಟೆಂಪೋ
ಭಟ್ಕಳದಿಂದ ಸಿಗಂದೂರಿಗೆ ತೆರಳುತ್ತಿದ್ದ ಟೆಂಪೋಗೆ ಎದುರಿನಿಂದ ಬಂದ ಮತ್ತೊಂದು ಟೆಂಪೋ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡೂ ವಾಹನದಲ್ಲಿದ್ದ ಸುಮಾರು 10ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.