ಕರ್ನಾಟಕ

karnataka

ETV Bharat / jagte-raho

ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ: ಮಹಿಳೆ ಸ್ಥಳದಲ್ಲೇ ಸಾವು - Lorry accident

ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಯಲ್ಲಾಪುರ ಬಳಿ ನಡೆದಿದೆ ನಡೆದಿದೆ.

ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ

By

Published : May 1, 2019, 8:27 AM IST

Updated : May 1, 2019, 9:14 AM IST

ಶಿರಸಿ: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಯಲ್ಲಾಪುರ ತಾಲೂಕಿನ ಹಿರೇಸರದ ನಿವಾಸಿ ರೇಖಾ ಸುಬ್ರಹ್ಮಣ್ಯ ಹೆಗಡೆ ಸ್ಥಳದಲ್ಲಿಯೇ ಮೃತ ಮಹಿಳೆ. ರೇಖಾ ಹಾಗೂ ಈಕೆಯ ಪತಿ ಸುಬ್ರಹ್ಮಣ್ಯ ಹೆಗಡೆ ಇಬ್ಬರೂ ಜೊತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಯು ಡಿಕ್ಕಿ ಹೊಡೆದಿದೆ. ಪರಿಣಾಮ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಸುಬ್ರಹ್ಮಣ್ಯ ಹೆಗಡೆ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : May 1, 2019, 9:14 AM IST

ABOUT THE AUTHOR

...view details