ಹಾಸನ: ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವತಿಯೋರ್ವಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಗಿರಿಜಾ (19) ಮೃತ ದುರ್ದೈವಿ. ಮೃತಳ ಸಹೋದರಿ ಚಂದ್ರಕಲಾ (22) ಎಂಬುವರು ಗಂಭೀರ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ವಡ್ಡರಹಟ್ಟಿಯಿಂದ ಹಿರೀಸಾವೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ನರಿಹಳ್ಳಿ ಬಳಿ ಎದುರಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಗಿರಿಜಾ ಸಾವನ್ನಪ್ಪಿದ್ದು, ಆಕೆಯ ಸಹೋದರಿ ಚಂದ್ರಕಲಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುವಿಗೆ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.