ಕರ್ನಾಟಕ

karnataka

ETV Bharat / jagte-raho

ದೇವಸ್ಥಾನದಿಂದ ಮರಳುತ್ತಿದ್ದಾಗ ಬೊಲೆರೋ ಡಿಕ್ಕಿ: ಬೈಕ್ ಸವಾರರಿಬ್ಬರ ದುರ್ಮರಣ - byadagi accident news

ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

bike accident
ಬೈಕ್ ಅಪಘಾತ

By

Published : Jan 2, 2021, 1:51 AM IST

Updated : Jan 2, 2021, 4:26 AM IST

ಹಾವೇರಿ: ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದಮನಹಳ್ಳಿ ಗ್ರಾಮದ ಬಳಿ ನಡೆದಿದೆ.

ಗಣಜೂರು ಗ್ರಾಮದ ನಿವಾಸಿಗಳಾದ ಮಂಜು ಸೋಮನಕಟ್ಟಿ (37), ಬಸವರಾಜ ವಾಲ್ಮೀಕಿ (40) ಮೃತಪಟ್ಟವರಾಗಿದ್ದು, ಇವರು ಹೊನ್ನತ್ತಿ ಮತ್ತು ಕದರಮಂಡಲಗಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಸ್ಸಾಗುತ್ತಿದ್ದರು.

ಇದನ್ನೂ ಓದಿ:ಟೆರೇಸ್​​​ ಮೇಲಿಂದ ಬಿದ್ದು ಗಾಯಗೊಂಡಿದ್ದ ಉದ್ಯಮಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಪ್ರಯಾಣಿಸುತ್ತಿದ್ದ ಸರ್ಕಾರಿ ವಾಹನ ಅವರ ಬೈಕ್​ಗೆ ಡಿಕ್ಕಿಯಾಗಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

Last Updated : Jan 2, 2021, 4:26 AM IST

ABOUT THE AUTHOR

...view details