ಕಲಬುರಗಿ: ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೋರ್ವ ಪೊಲೀಸರ ಕಣ್ಣು ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಪೊಲೀಸರ ಕಣ್ಣು ತಪ್ಪಿಸಿ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ - Accused escapes from hospital in kalburgi
ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೋರ್ವ ಪೊಲೀಸರ ಕಣ್ಣು ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಪೊಲೀಸರ ಕಣ್ಣು ತಪ್ಪಿಸಿ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ
ಕುಖ್ಯಾತ ಅಂತರ ರಾಜ್ಯ ಕಳ್ಳ ಮುಜೀಬ್ (25) ಪರಾರಿಯಾದ ವಿಚಾರಣಾಧೀನ ಕೈದಿ. ಈತ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣ ನಿವಾಸಿಯಾಗಿದ್ದು, ತೆಲಂಗಾಣದ ಪರ್ಗಿ, ರೋಜಾ ಠಾಣೆ ಸೇರಿದಂತೆ ರಾಜ್ಯ, ಹೊರ ರಾಜ್ಯಗಳಲ್ಲಿ ಈತನ ಮೇಲೆ ಹಲವು ಕಳ್ಳತನ ಪ್ರಕರಣ ದಾಖಲಾಗಿವೆ.
ಅನಾರೋಗ್ಯದ ಕಾರಣ ಕಳೆದ ಎರಡು ದಿನಗಳಿಂದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ರಾತ್ರಿ ಬಂದೋಬಸ್ತ್ನಲ್ಲಿದ್ದ ಪೊಲೀಸರ ಕಣ್ಣು ತಪ್ಪಿಸಿ ಆರೋಪಿ ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬ್ರಹ್ಮಪುರ ಠಾಣೆಯ ಪೊಲೀಸರು ಆರೋಪಿಯ ಬಂಧನಕ್ಕೆ ಜಾಲ ಬಿಸಿದ್ದಾರೆ.