ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಕುಮಾರ್ ಹಾಗೂ ಮಾಜಿ ಶಾಸಕ ಆರ್.ವಿ.ದೇವರಾಜ್ ಮಗ ಯುವರಾಜ್ ಇಂದು ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಮೂವರ ಮೊಬೈಲ್ ಸೀಜ್: ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಚುರುಕು - ಯುವರಾಜ್
ಸಿಸಿಬಿ ವಿಚಾರಣೆಗೆ ಹಾಜರಾಗಿರುವ ನಟ, ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಕುಮಾರ್ ಹಾಗೂ ಯುವರಾಜ್ರ ಮೊಬೈಲ್ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಚುರುಕು
ಮೂವರ ಮೊಬೈಲ್ಗಳನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಪಿ ಗೌತಮ್ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದು, ವಾಟ್ಸಪ್ ಚಾಟಿಂಗ್ ಸೇರಿದಂತೆ ಮೊಬೈಲ್ ಚಾಟ್ಗಳ ಆಧಾರದ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.