ಅಥಣಿ: ತಾಲೂಕಿನ ಹಣಮಾಪುರ ಗ್ರಾಮದಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಓರ್ವ ಆರೋಪಿಯನ್ನು ಅಥಣಿ ಪೊಲೀಸರು ಬಂಧಿಸಿದ್ದು, 18 ಕೆಜಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಕ್ರಮ ಗಾಂಜಾ ದಾಸ್ತಾನು-ಮಾರಾಟ: ಓರ್ವನ ಬಂಧನ - athani leatest news
ಸುಮಾರು 2,70,000 ರೂ. ಮೌಲ್ಯದ 18 ಕೆಜಿ ಗಾಂಜಾವನ್ನು ಜಪ್ತಿ ಮಾಡಿ, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಗಾಂಜಾ ದಾಸ್ತಾನು-ಮಾರಾಟ, ಓರ್ವನನ್ನು ಬಂಧಿಸಿದ ಅಥಣಿ ಪೋಲಿಸರು
ಆರೋಪಿ ಕರೆಪ್ಪ ಐನಾಪೂರೆ, ಅಕ್ರಮವಾಗಿ ತನ್ನ ಜಮೀನಿನಲ್ಲಿ ಗಾಂಜಾ ಬೆಳೆಸಿ ಅವುಗಳನ್ನು ಕಿತ್ತು ಮಾರಾಟ ಮಾಡುವ ಸಲುವಾಗಿ ತನ್ನ ಮನೆಯ ಮುಂದೆ ಇಟ್ಟುಕೊಂಡಾಗ ಅಥಣಿ ಪೊಲೀಸರು ದಾಳಿ ಮಾಡಿದ್ದಾರೆ. ಸುಮಾರು 2,70,000 ರೂ. ಮೌಲ್ಯದ 18 ಕೆಜಿ ಗಾಂಜಾವನ್ನು ಜಪ್ತಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.