ದಾವಣಗೆರೆ: ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ 538 ಟನ್ ಅಕ್ರಮ ಮರಳು ವಶಪಡಿಸಿಕೊಂಡಿದೆ.
ಅಕ್ರಮ ಮರಳು ಅಡ್ಡೆ ಮೇಲೆ ದಾಳಿ: 538 ಟನ್ ಮರಳು ವಶಕ್ಕೆ - ದಾವಣಗೆರೆ ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ನೇತೃತ್ವದ ತಂಡ ದಾಳಿ
ಅಕ್ರಮ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ 538 ಟನ್ ಅಕ್ರಮ ಮರಳು ವಶಪಡಿಸಿಕೊಂಡಿದೆ.
ಮರಳು ಅಡ್ಡೆ ಮೇಲೆ ದಾಳಿ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು, ಹರಳಹಳ್ಳಿ ಬಳಿ ಜಮೀನುಗಳಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿದ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ತುಷಾರ್ ಬಿ. ಹೊಸೂರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಮರಳು ವಶಪಡಿಸಿಕೊಂಡ ಬಳಿಕ ಹೊನ್ನಾಳಿ ಎಪಿಎಂಸಿ ಆವರಣಕ್ಕೆ ಶಿಫ್ಟ್ ಮಾಡಲಾಗಿದೆ.
ಇನ್ನು ದಾಳಿಯಲ್ಲಿ ಪಿಎಸ್ಐ ತಿಪ್ಪೆಸ್ವಾಮಿ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ವಿನಯಾ ಬಣಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.