ಕೋಲಾರ:ಮನೆಯಲ್ಲಿ ಯಾರು ಇಲ್ಲದ ವೇಳೆ 6 ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮುಳಬಾಗಿಲು ತಾಲೂಕಿನ ನಂಗಲಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯು ಇದೀಗ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಇನ್ನು ಅಸ್ವಸ್ಥ ಬಾಲಕಿಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿನಿತ್ಯ ಮನೆಯ ಬಳಿ ಮಗುವನ್ನ ಆಟವಾಡಿಸುತ್ತಿದ್ದ ವೃದ್ಧ, ಕಳೆದ ರಾತ್ರಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಮಗುವಿನ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಆರೋಪಿಯ ಮೇಲೆ ಬಾಲಕಿಯ ತಂದೆ ಮಚ್ಚಿನಿಂದ ಹಲ್ಲೆ ಮಾಡಿದ್ದು ವೃದ್ಧ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.ಸ್ಥಳಕ್ಕೆ ಭೇಟಿ ನೀಡಿದ ನಂಗಲಿ ಪೊಲೀಸರು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.