ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೋಣಾಜೆ ಬಳಿ ಮೂವರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಮೂವರು ನ್ಯಾಯಾಂಗ ಬಂಧನಕ್ಕೆ - girl harrassement at magalore
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೋಣಾಜೆ ಬಳಿ ಮೂವರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
attempts-to-molest- girl students at magalore
ಕಿರಣ್ ಕುಮಾರ್ (26), ಗೋಪಾಲ್ (25), ಸುಭಾಷ್ (29) ಬಂಧಿತ ಆರೋಪಿಗಳು. ಕೋಣಾಜೆ ಸಮೀಪದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾರೆ. ಅಪ್ರಾಪ್ತ ಬಾಲಕಿಯರು ನೀಡಿದ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಗಳನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಫೆ.25ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.