ಬೆಂಗಳೂರು:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಂಡಿಯಾ-ನ್ಯೂಜಿಲೆಂಡ್ ಪಂದ್ಯದ ಮೇಲೆ ಬೆಟ್ಟಿಂಗ್: ಆರೋಪಿ ಅರೆಸ್ಟ್ - Betting on India and New Zealand match,
ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಾಡುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಮೊದ್ ಅಲಿಯಾಸ್ ಪ್ರಕಾಶ್ ಬಂಧಿತ ಆರೋಪಿ. ಈತ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಸುರೇಶ್ ಜ್ಯುವೆಲ್ಲರಿ ಶಾಪ್ ಮುಂಭಾಗದ ಜಟಕಾ ಸ್ಟಾಂಡ್ ಬಳಿ ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ಪಂದ್ಯದ ಮೇಲೆ ಬೆಟ್ಟಿಂಗ್ ಆಡುತ್ತಿದ್ದ. ಸೋತಿರುವ ಪಂಟರ್ಗಳಿಂದ ಹಣ ಸಂಗ್ರಹಣೆ ಮಾಡುತ್ತಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತ ಕೆ.ಪಿ. ಅಗ್ರಹಾರದ ನಿವಾಸಿಯಾಗಿದ್ದು, ಅನೇಕ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಕಟ್ಟುತ್ತಿದ್ದ ಎಂದು ತಿಳಿದು ಬಂದಿದೆ.
ಆರೋಪಿಯಿಂದ ನಗದು ಮತ್ತು ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಕೆ.ಪಿ. ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.