ಬೀದರ್: ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 1.76 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ.
ಬೀದರ್: 1.76 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ - Hokrana Police Station in Bidar District
ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಪೊಲೀಸರು ದಾಳಿ ನಡೆಸಿ 1.76 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಗಾಂಜಾದೊಂದಿಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
![ಬೀದರ್: 1.76 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ dsd](https://etvbharatimages.akamaized.net/etvbharat/prod-images/768-512-9438700-thumbnail-3x2-vis.jpg)
1.76 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಶ್ರೀಮಂತ ಬಿರಾದರ ಹಾಗೂ ನಂದಕಿಶೋರ ಬಿರಾದರ ಬಂಧಿತ ಆರೋಪಿಗಳು. ಇವರು ಔರಾದ್ ತಾಲೂಕಿನ ಡೊಂಗರಗಾಂವ್ ಗ್ರಾಮದ ಬಳಿಯ ಚೌಕ್ನ ಅಂಗಡಿಯೊಂದರ ಹಿಂಭಾಗದಲ್ಲಿ ಗಾಂಜಾ ಅಡಗಿಸಿಟ್ಟಿದ್ದರು.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಔರಾದ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಹೊಕ್ರಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.