ಬೀದರ್: ಡೆಲ್ಲಿ ಕ್ಯಾಪಿಟಲ್ ಹಾಗೂ ಕೋಲ್ಕತ್ತಾ ನೈಟ್ರೈಡರ್ಸ್ ನಡುವೆ ನಡೆಯುತ್ತಿದ್ದ ಪಂದ್ಯಾವಳಿ ಮೇಲೆ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಐಪಿಎಲ್ ಬೆಟ್ಟಿಂಗ್: ಬೀದರ್ನಲ್ಲಿ ಇಬ್ಬರು ಬುಕ್ಕಿಗಳ ಬಂಧನ - Indian Premier League betting
ಬೀದರ್ನಲ್ಲಿ ಬಂಧಿತ ಆರೋಪಿಗಳಿಂದ 21,020 ರೂ. ನಗದು ವಶ ಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಬಸವಕಲ್ಯಾಣ ನಗರದ ಥೇರ್ ಮೈದಾನ ಬಳಿ ರಾಚಯ್ಯ ಸ್ವಾಮಿ ಹಾಗೂ ಅರವಿಂದ ಹರ್ಪಲ್ಲೆ ಎಂಬಾತರು ಡೆಲ್ಲಿ ಕ್ಯಾಪಿಟಲ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದರು.

ಕೆಟ್ ಬೆಟ್ಟಿಂಗ್
ಬಂಧಿತ ಆರೋಪಿಗಳಿಂದ 21,020 ರೂ. ನಗದು ವಶ ಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಬಸವಕಲ್ಯಾಣ ನಗರದ ಥೇರ್ ಮೈದಾನ ಬಳಿ ರಾಚಯ್ಯ ಸ್ವಾಮಿ ಹಾಗೂ ಅರವಿಂದ ಹರ್ಪಲ್ಲೆ ಎಂಬಾತರು ಡೆಲ್ಲಿ ಕ್ಯಾಪಿಟಲ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಪಿಎಸ್ಐ ಜಿ.ಎಂ ಪಾಟೀಲ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.