ಕರ್ನಾಟಕ

karnataka

By

Published : Nov 2, 2019, 5:39 PM IST

ETV Bharat / jagte-raho

ಉಪ್ಪಿನಂಗಡಿ ಬಳಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಶನಿವಾರದಂದು ನಡೆದಿದೆ.

ಉಪ್ಪಿನಂಗಡಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಮಂಗಳೂರು: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿಬೈಕ್ ಹಾಗೂ ಕಾರು ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಸವಾರನನ್ನು ಕಲ್ಲೇರಿ ನಿವಾಸಿ ಅಬ್ದುಲ್ ಅಝೀಜ್ (37) ಎಂದು ಗುರುತಿಸಲಾಗಿದೆ. ಅಝೀಝ್ ತನ್ನ ಬೈಕ್​ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಾರು ನಡುವೆ ಮಠ ಎಂಬಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್ ಅಝೀಝ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details