ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಬೈಕ್ ಸವಾರರ ದುರ್ಮರಣ - Bike riders have died on the spot
ಶಿವಮೊಗ್ಗ ಜಿಲ್ಲೆಯಲ್ಲಿಂದು ರಸ್ತೆ ಅಪಘಾತಕ್ಕೆ ಇಬ್ಬರು ಬೈಕ್ ಸವಾರರು ಬಲಿಯಾಗಿದ್ದಾರೆ. ಹೊಸನಗರ ಮತ್ತು ಶಿವಮೊಗ್ಗ ತಾಲೂಕಲ್ಲಿ ಈ ಅಪಘಾತಗಳು ಸಂಭವಿಸಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಬೈಕ್ ಸವಾರರ ದುರ್ಮರಣ
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಬೈಕ್ ಸವಾರರ ದುರ್ಮರಣ
ಹೊಸನಗರ ತಾಲೂಕು ರಿಪ್ಪನ್ಪೇಟೆ ಬಳಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಕಮ್ಮಚ್ಚಿ ಗ್ರಾಮದ ಮಂಜುನಾಥ್ ಆಚಾರ್ಯ (50) ಮೃತ ವ್ಯಕ್ತಿ. ಮಂಜುನಾಥ್ ಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿಯಾಗಿದ್ದ. ನಂತ್ರ ರಿಪ್ಪನಪೇಟೆ ಪೊಲೀಸರು ಲಾರಿಯನ್ನು ಬೆನ್ನಟ್ಟಿ ಹಿಡಿದಿದ್ದಾರೆ.
ಮತ್ತೊಂದೆಡೆ ಶಿವಮೊಗ್ಗ ತಾಲೂಕು ಮುದುವಾಲ ಗ್ರಾಮದಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಇದರಲ್ಲಿ ಬೈಕ್ ಸವಾರ ದೂದ್ಯಾನಾಯ್ಕ (25) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.