ಮೈಸೂರು:ಅಪರಿಚಿತ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಹುಣಸೂರು ತಾಲೂಕಿನ ಹೈರಿಗೆ ಗೇಟ್ ಬಳಿ ನಡೆದಿದೆ.
ಅಪರಿಚಿತ ವ್ಯಕ್ತಿಯ ಶವ ಪತ್ತೆ... ಕೊಲೆ ಮಾಡಿ ಬಿಸಾಕಿರುವ ಶಂಕೆ...! - ಯಾರೋ ಕೊಲೆ ಮಾಡಿ ದೇಹವನ್ನು ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ
ಹುಣಸೂರು ತಾಲೂಕಿನ ಹೈರಿಗೆ ಗೇಟ್ ಬಳಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.
ರಕ್ತ-ಸಿಕ್ತವಾಗಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬಿಸಾಡಿರುವ ಶಂಕೆ...!
ದಯಾನಂದ್ ಎಂಬುವವರ ಜಮೀನಿನ ಬಳಿ ಅಪರಿಚಿತ ವ್ಯಕ್ತಿವೋರ್ವನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯ ದೇಹದ ಮೇಲೆ ಗಾಯದ ಗುರುತುಗಳು ಇದ್ದು, ಯಾರೋ ಕೊಲೆ ಮಾಡಿ ಶವ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎಸ್ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.