ಮುಂಬೈ: ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಮಾಡ್ಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ನವೆಂಬರ್ 4 ರಂದು ಮುಂಬೈ ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅಲಿಬಾಗ್ ನ್ಯಾಯಾಲಯ ಆದೇಶ ನೀಡಿತ್ತು.