ಕರ್ನಾಟಕ

karnataka

ETV Bharat / jagte-raho

ಸಕಲೇಶಪುರದಲ್ಲಿ ಭೀಕರ ಅಪಘಾತ... ನಾಲ್ವರು ಸ್ಥಳದಲ್ಲೇ ದುರ್ಮರಣ - ಭೀಕರ ಅಪಘಾತ

ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕ, ಧರ್ಮಸ್ಥಳದಿಂದ ಹಾಸನ ಕಡೆಗೆ ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಸಕಲೇಶಪುರದಲ್ಲಿ ಭೀಕರ ಅಪಘಾತ

By

Published : Mar 10, 2019, 12:56 PM IST

ಹಾಸನ: ಕೆಎಸ್ಆರ್​ಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಗದೀಶ್(30), ಗೌರಮ್ಮ(45), ಚಿನ್ನಯ್ಯ (50) ಹಾಗೂ ಭುವನೇಶ್(6) ಸಾವನ್ನಪ್ಪಿದ್ದರೆ, ಭವ್ಯ(16) ಮತ್ತು ನಾಗರತ್ನ(38) ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಸಕಲೇಶಪುರದಲ್ಲಿ ಭೀಕರ ಅಪಘಾತ

ಘಟನೆಯ ವಿವರ...

ನಿದ್ದೆ ಮಂಪರಿನಲ್ಲಿದ್ದ ಕಾರು ಚಾಲಕ, ಧರ್ಮಸ್ಥಳದಿಂದ ಹಾಸನ ಕಡೆಗೆ ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಬೆಂಗಳೂರು ಯಶವಂತಪುರದ ಮೂಲದ ಮಹದೇವ್ ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದರೂ ಮಾಹಿತಿ ರವಾನಿಸಲು ಮೊಬೈಲ್ ನೆಟ್ವರ್ಕ್ ಇಲ್ಲದ ಕಾರಣ ತುರ್ತು ವಾಹನವನ್ನು ಸ್ಥಳಕ್ಕೆ ಕಳಿಸಲು ತೊಂದರೆ ಉಂಟಾಗಿದೆ. ಹೀಗಾಗಿಯೇ ಅಪಘಾತದಲ್ಲಿ ನಾಲ್ವರು ಸಾಯಬೇಕಾದ ಪರಿಸ್ಥಿತಿ ಉಂಟಾಯಿತು. ಇಲ್ಲವಾಗಿದ್ದರೆ ಅವರು ಬದುಕುಳಿಯುತ್ತಿದ್ದರು ಎಂದು ಹೇಳುತ್ತಾರೆ.

ಸಕಲೇಶಪುರ ಮತ್ತು ಮಂಗಳೂರು ನಡುವಿನ ಶಿರಾಡಿ ಘಾಟ್​ನಲ್ಲಿ ಸಾಕಷ್ಟು ಅಪಘಾತ ಸಂಭವಿಸುತ್ತಲೇ ಇರುತ್ತವೆ. ಹಾಗಾಗಿ ಮಾರನಹಳ್ಳಿ ಗಡಿಯಲ್ಲಿ ವಾಹನದ ವ್ಯವಸ್ಥೆ ಮಾಡಿದರೆ ಅಪಘಾತ ಸಂಭವಿಸಿದಲ್ಲಿ ತಕ್ಷಣ ನೆರವಿಗೆ ಧಾವಿಸಲು ಅನುಕೂಲವಾಗುತ್ತದೆ ಎಂಬುದು ಈ ಭಾಗದ ಜನರ ಆಗ್ರಹ.

ಒಟ್ಟಾರೆ ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಹೊರಟಿದ್ದವರು ಮಾರ್ಗಮಧ್ಯೆ ಸಾವನ್ನಪ್ಪಿದ್ದು ದುರಂತ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ABOUT THE AUTHOR

...view details