ಕರ್ನಾಟಕ

karnataka

ETV Bharat / jagte-raho

45 ಪ್ರಯಾಣಿಕರಿದ್ದ ಬಸ್​ ಪಲ್ಟಿ: ಮೂವರ ದುರ್ಮರಣ - ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bus overturns
ಬಸ್​ ಪಲ್ಟಿ

By

Published : Oct 10, 2020, 10:22 AM IST

ಅಲಿಗರ್: 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್​ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗರ್​​ ಜಿಲ್ಲೆಯ ತಪ್ಪಲ್ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಬಸ್​ ಇದಾಗಿದ್ದು, ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಬಲಿಯಾದವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ABOUT THE AUTHOR

...view details