ಚಿಕ್ಕಮಗಳೂರು:ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮುಗಿಸಿ, ಮನೆಗೆ ಹಿಂದಿರುಗುತ್ತಿದ್ದ ವೇಳೆ, ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸಾವನಪ್ಪಿರುವ ಘಟನೆ ತಾಲೂಕಿನ ಹಿರೇಗೌಜ ಸಮೀಪ ಈ ಅಪಘಾತ ಸಂಭವಿಸಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಟಿಎಸ್ ಸಿದ್ದರಾಮಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಮ್ಮ ಕರ್ತವ್ಯವನ್ನು ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ, ಈ ಅವಘಡ ಜರುಗಿದೆ.