ರಾಯಚೂರು: ಮಸ್ಕಿ ತಾಲೂಕಿನ ಮಲ್ಲಿಕಾರ್ಜುನ ಕ್ಯಾಂಪ್ ಬಳಿ ಕಾರು- ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕಾರು-ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು - ರಾಯಚೂರು
ಬೈಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾಯಚೂರು ಜಿಲ್ಲೆ ಮಲ್ಲಿಕಾರ್ಜುನ ಕ್ಯಾಂಪ್ ಬಳಿ ಘಟನೆ ಸಂಭವಿಸಿದೆ.
ಕಾರು-ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಸುಮಾರು 32 ವರ್ಷ ಇರಬಹುದೆಂದು ಅಂದಾಜಿಸಲಾಗಿದೆ. ಬೈಕ್ ಸವಾರ ಮಸ್ಕಿ ಕಡೆ ತೆರಳುವ ವೇಳೆ ಮಾರ್ಗಮಧ್ಯೆ ಈ ಘಟನೆ ನಡೆದಿದ್ದು, ಕಾರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸದ್ಯ ಘಟನಾ ಸ್ಥಳಕ್ಕೆ ಬಳಗಾನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.