ಕರ್ನಾಟಕ

karnataka

ETV Bharat / jagte-raho

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಕೊಳೆತ ಸ್ಥಿತಿಯಲ್ಲಿ ಮೃತದೇಹ

ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ವ್ಯಕ್ತಿವೋರ್ವನ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಪಕ್ಕದಲ್ಲೇ ವಿಷದ ಬಾಟಲಿ ಜೊತೆಗೆ ಬಿಯರ್ ಬಾಟಲ್ ಸಹ ಪತ್ತೆಯಾಗಿದೆ. ಹೀಗಾಗಿ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Carcass in rotten condition in ballary
ಕೊಳೆತ ಸ್ಥಿತಿಯಲ್ಲಿ ಮೃತದೇಹ

By

Published : Feb 4, 2020, 5:56 PM IST

ಬಳ್ಳಾರಿ:ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಇಂದು ಅನುಮಾನಾಸ್ಪದವಾಗಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 65 ರಿಂದ 70 ವರ್ಷ ಆಸುಪಾಸಿನ ವ್ಯಕ್ತಿಯ ಮೃತದೇಹ ಇಂದು ಬೆಳಗ್ಗೆ ಕುರಿಗಾಹಿಯೋರ್ವನ‌ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಆತ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ‌ ನೀಡಿದ್ದಾನೆ.

ಕೂಡ್ಲಿಗಿ ಪಟ್ಟಣ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತು ನಾರುತ್ತಿದೆ. ಅಲ್ಲದೇ ಮೃತದೇಹದ ಪಕ್ಕದಲ್ಲೇ ವಿಷದ ಬಾಟಲಿ ಜೊತೆಗೆ ಬಿಯರ್ ಬಾಟಲ್ ಸಹ ಪತ್ತೆಯಾಗಿದೆ. ಹೀಗಾಗಿ ಇದು ಆತ್ಮಹತ್ಯೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details