ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ನವೆಂಬರ್ 26ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಳ್ಳಾರಿ ಬಂದ್ ವೇಳೆ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಸಚಿವ ಆನಂದ ಸಿಂಗ್ ಅವರ ಭಾವಚಿತ್ರವನ್ನು ದಹಿಸಿದ ಇಬ್ಬರು ಕನ್ನಡಪರ ಸಂಘಟನೆಗಳ ಮುಖಂಡರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿದೆ.
ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಪ್ರತಿಭಟನಾನಿರತ ಕನ್ನಡಪರ ಸಂಘಟನೆಗಳ ಮುಖಂಡರು ಟಯರ್ಗೆ ಬೆಂಕಿ ಹಚ್ಚಿ ಸಿಎಂ ಮತ್ತು ಸಚಿವ ಆನಂದಸಿಂಗ್ ಅವರ ಭಾವಚಿತ್ರಗಳನ್ನು ದಹಿಸಿದ ಆರೋಪದ ಹಿನ್ನೆಲೆ ಕರ್ನಾಟಕ ಜನ ಸೈನ್ಯ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಹಾಗೂ ಜೆಡಿಎಸ್ ಯುವ ಮುಖಂಡ ಡಿ. ವಿಜಯ ಕುಮಾರ ಅವರ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.