ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೋಲಿಸರು ಬಂಧಿಸಿದ್ದು, ಆರೋಪಿಗಳಿಂದ 8 ಕೆಜಿ 650 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಖೆಡ್ಡಕ್ಕೆ ಬೀಳಿಸಿದ ಸಿಸಿಬಿ ಪೊಲೀಸರು - ನಂದಿನಿ ಬಡಾವಣೆಯಲ್ಲಿರುವ ಮನೆ
ಬಂಧಿತ ಆರೋಪಿಗಳಾದ ಶ್ರೀನಿವಾಸ (50), ಲಿಯಾಕುತ್ ವುಲ್ಲಾ (28), ವಸೀಂ ಅಕ್ರಂ (28) ಮತ್ತು ನವೀದ್ ಪಾಷ (28). ಈ ನಾಲ್ವರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ನಂದಿನಿ ಬಡಾವಣೆಯಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ನಡೆಸಿದಾಗ ಶ್ರೀನಿವಾಸ ಮತ್ತು ನವೀದ್ ಪಾಷ ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದು, ವಸೀಂ ಅಕ್ರಂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿರುವುದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.